ಬೆಂಗಳೂರು: ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ 6 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಭಾರತೀಯ ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಡೆಹ್ರಾಡೂನ್, ಪುರಿ, ತೆಹ್ರಿ, ನೈನಿತಾಲ್, ಚಂಪಾವತ್ ಮತ್ತು ಉಧಮ್ ಸಿಂಗ್ ನಗರಗಳು ಸೇರಿದಂತೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.