1 ರಿಂದ 8ನೇ ತರಗತಿ ಶಾಲೆ ಆರಂಭಕ್ಕೆ ಇಂದೇ ನಿರ್ಧಾರ: ಮಹತ್ವದ ಸಭೆ

Prasthutha|

ಬೆಂಗಳೂರು: 1ರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದ್ದು, ಇಂದು ಸಂಜೆ 4 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತಿದೆ.

- Advertisement -

ಒಂದು ವೇಳೆ ಸಲಹಾ ಸಮಿತಿ ತಜ್ಞರು ಪ್ರಾಥಮಿಕ ಶಾಲೆ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಿದರೆ ಸೆಪ್ಟೆಂಬರ್ ಮೊದಲ ವಾರದಿಂದಲೇ ಭೌತಿಕ ತರಗತಿಗಳು ಆರಂಭವಾಗಲಿವೆ.

ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚುತ್ತಿರುವುದರಿಂದ 1-5ನೇ ತರಗತಿಗಳಿಗೆ ಶಾಲೆಗೆ ಬರದಂತೆ ಸೂಚಿಸುವ ಸಾಧ್ಯತೆಯೂ ಇದ್ದು, 6,7,8ನೇ ತರಗತಿ ಮಕ್ಕಳಿಗೆ ಮಾತ್ರ ಶಾಲೆಗೆ ಬರುವಂತೆ ಸೂಚಿಸುವ ಸಾಧ್ಯತೆ ಕೂಡ ದಟ್ಟವಾಗಿದೆ ಎನ್ನಲಾಗಿದೆ.

- Advertisement -

ಒಂದು ವೇಳೆ ಶಾಲೆ ಆರಂಭವಾದರೆ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿ ತರಗತಿಗಳು ಆರಂಭವಾಗುವುದು ಖಚಿತವಾಗಿದೆ.

Join Whatsapp