ಬೆಂಗಳೂರು: ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ಇದನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಲು ವಿವಿಧ ಮುಸ್ಲಿಮ್ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ನಿರ್ಧರಿಸಿವೆ.
ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರವರ ಪೂರ್ಣ ಪೀಠ ತೀರ್ಮಾನ ಕೈಗೊಂಡಿದ್ದು, ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಹೇಳಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹೀಂ, ಹೈಕೋರ್ಟ್ ತೀರ್ಪು ಸಮರ್ಪಕವಾಗಿಲ್ಲ. ಹಿಜಾಬ್ ಧರಿಸುವುದು ಇಸ್ಲಾಮ್ ನ ಪ್ರಮುಖ ಭಾಗವಾಗಿದೆ. ಹೈಕೋರ್ಟ್ ಇದನ್ನು ಪರಿಗಣಿಸಿಲ್ಲ. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದರು.