Home ಟಾಪ್ ಸುದ್ದಿಗಳು ರಾಹುಲ್ ಅನರ್ಹತೆ | ಕಪ್ಪು ಬಟ್ಟೆ ಧರಿಸಿ ಲೋಕಸಭೆಗೆ ಹಾಜರಾಗಲು ನಿರ್ಧಾರ

ರಾಹುಲ್ ಅನರ್ಹತೆ | ಕಪ್ಪು ಬಟ್ಟೆ ಧರಿಸಿ ಲೋಕಸಭೆಗೆ ಹಾಜರಾಗಲು ನಿರ್ಧಾರ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ವಿಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣಿದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ.


ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್ ಎಸ್,, ಸಿಪಿಐ (ಎಂ), ಸಿಬಿಐ, ಆರ್ ಜೆಡಿ, ಎನ್ ಸಿಪಿ, ಐಯುಎಂಎಲ್, ಎಂಡಿಎಂಕೆ, ಕೇರಳ ಕಾಂಗ್ರೆಸ್, ಟಿಎಂಸಿ, ಆರ್ ಎಸ್ ಪಿ, ಎಎಪಿ, ಎನ್ ಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳ ನಾಯಕರು ಭೇಟಿಯಾದರು. ಸಭೆ ಬಳಿಕ ರಾಹುಲ್ ಗಾಂಧಿ ಅನರ್ಹತೆಯನ್ನು ವಿರೋಧಿಸಿ ಲೋಕಸಭೆಗೆ ಕಪ್ಪು ಬಟ್ಟೆ ಧರಿಸಿ ಹಾಜರಾಗಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp
Exit mobile version