ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪುಪಟ್ಟಿಗೆ ಸೇರಿಸಲು ತೀರ್ಮಾನ: ಲಕ್ಷ್ಮಿ ಹೆಬ್ಬಾಳ್ಕರ್

Prasthutha|

ಬೆಂಗಳೂರು: ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇನೆ. ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಮೊಟ್ಟೆ ವಿತರಣೆ ಕುರಿತು ನಿಗಾವಹಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

- Advertisement -


ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ವಿತರಣೆ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನಸೌಧದಲ್ಲಿ ಮಾತನಾಡಿ, ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನ, ಪೂರೈಕೆ ಮಾಡುವವರನ್ನ ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇನೆ. ಜೊತೆಗೆ ಮೊಟ್ಟೆ ವಿತರಕರ ಪಟ್ಟಿಯಿಂದಲೂ ಅವರನ್ನ ಕೈಬಿಡಲಾಗುವುದು ಎಂದು ಎಂದು ಎಚ್ಚರಿಸಿದ್ದಾರೆ. ಖರೀದಿ ವಿಕೇಂದ್ರೀಕರಣ ಮಾಡಿದ್ದರಿಂದಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲೂ ಮೊಟ್ಟೆ ಖರೀದಿಯಾಗುತ್ತಿದೆ. ಯಾವುದೇ ಕಂಟ್ರೋಲ್ ಇಲ್ಲದೇ ಖರೀದಿ ನಡೆಯುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶ. ನಮ್ಮ ಇಲಾಖೆಯ ಉದ್ದೇಶವೇ ಎಡವುತ್ತಿರುವುದು ಗಮನಕ್ಕೆ ಬಂದಿದೆ. ಕಳಪೆ ಮೊಟ್ಟೆ ವಿತರಣೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದ್ದಾರೆ.