ಲಕ್ಷದ್ವೀಪದ ಶಿಕ್ಷಣ ಇಲಾಖೆಯ ಕಚೇರಿ ಮುಚ್ಚಲು ಆಡಳಿತಾಧಿಕಾರಿ ನಿರ್ಧಾರ!

Prasthutha: July 2, 2021

ಕೊಚ್ಚಿ: ಲಕ್ಷದ್ವೀಪದ ಆಡಳಿತಾಧಿಕಾರಿ ಜಾರಿಗೆ ತಂದಿರುವ ಸುಧಾರಣೆಗಳ ವಿರುದ್ಧ ಲಕ್ಷದ್ವೀಪದಲ್ಲಿ ವ್ಯಾಪಕ ಪ್ರತಿಭಟನೆಗಳ ಮಧ್ಯೆ, ಲಕ್ಷದ್ವೀಪ ಆಡಳಿತದ ನೇತೃತ್ವದ ಕೇರಳದ ಕೊಚ್ಚಿಯಲ್ಲಿರುವ ಶಿಕ್ಷಣ ಇಲಾಖೆಯ ಕಛೇರಿಯನ್ನು ಮುಚ್ಚಲು ಲಕ್ಷದ್ವೀಪ ಆಡಳಿತ ನಿರ್ಧರಿಸಿದೆ.

ಕೊಚ್ಚಿಯಲ್ಲಿರುವ ಕಚೇರಿಯ ನೌಕರರಿಗೆ ಲಕ್ಷದ್ವೀಪದ ಕವರತ್ತಿಯಲ್ಲಿರುವ ಕಚೇರಿಗೆ ಒಂದು ವಾರದೊಳಗೆ ಬರುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ. ಕೊಚ್ಚಿಯ ವಿಲ್ಲಿಂಗ್ಡನ್ ದ್ವೀಪದಲ್ಲಿರುವ ಶಿಕ್ಷಣ ಇಲಾಖೆಯ ಕಚೇರಿ ಶೈಕ್ಷಣಿಕ ಉದ್ದೇಶಗಳಿಗಾಗಿ ಲಕ್ಷದ್ವೀಪದಿಂದ ಕೇರಳಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಹಾಯಕವಾಗಿತ್ತು. ಕೊಚ್ಚಿಯ ಕಚೇರಿಯಲ್ಲಿರುವ ನೌಕರರ ಸಂಖ್ಯೆಯನ್ನು ಕಡಿಮೆ ಮಾಡುವಂತೆ ಲಕ್ಷದ್ವೀಪ ಸರ್ಕಾರ ಈ ಹಿಂದೆ ನಿರ್ದೇಶನ ನೀಡಿತ್ತು. ಹೊಸ ಪ್ರಸ್ತಾಪವು ಇದರ ಮುಂದುವರಿದ ಭಾಗವಾಗಿದೆ ಎಂದು ತಿಳಿದುಬಂದಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ