ಬೆಂಗಳೂರು: ಸಣ್ಣ ನೇಕಾರರಿಗೆ 10 ಹೆಚ್ ಪಿವರೆಗೆ ಸಂಪೂರ್ಣ ಉಚಿತ ವಿದ್ಯುತ್ ನೀಡುವ ಕುರಿತಂತೆ ಪರಿಶೀಲಿಸಿ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಡಿ 10 ಹೆಚ್ಪಿವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ನಡೆದ ಸಭೆಯಲ್ಲಿ ಸಿಎಂ ಭರವಸೆ ನೀಡಿದರು.