‘ಕೊರೋನಾವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’ : ಶಿವ ಸೇನೆ ಆಗ್ರಹ

Prasthutha|

ಮುಂಬೈ: ಕೋವಿಡ್‌-19 ಸಾಂಕ್ರಾಮಿಕವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವುದಾಗಿ ಶಿವಸೇನಾ ಸಂಸದ ಸಂಜಯ್‌ ರಾವುತ್‌ ಗುರುವಾರ ಹೇಳಿದರು.

- Advertisement -

ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್‌ ಪರಿಸ್ಥಿತಿ ನಿಭಾಯಿಸಲು ರಾಷ್ಟ್ರದ ಇತರೆಡೆ ಮಹಾರಾಷ್ಟ್ರ ಮಾದರಿ ಅನುಸರಿಸಬೇಕು ಎಂದರು.

ಪ್ರಧಾನಿಯವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮತ್ತು ಕೇಂದ್ರ ಸರ್ಕಾರಕ್ಕೆ ಪತ್ರಗಳನ್ನು ಬರೆಯುವ ಮೂಲಕ ಉದ್ಧವ್‌ ಅವರು ಕೋವಿಡ್‌ ಬಿಕ್ಕಟ್ಟನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಒತ್ತಾಯಿಸಿದ್ದಾರೆ ಎಂದು ತಿಳಿಸಿದರು.

- Advertisement -

ಒಂದು ತಿಂಗಳಿನಿಂದಲೂ ಮುಖ್ಯಮಂತ್ರಿ ಈ ಒತ್ತಾಯ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್‌ ಕೂಡ ಈ ಬಗ್ಗೆ ಗಮನ ಹರಿಸಿದೆ ಎಂದು ಅವರು ಹೇಳಿದರು.

Join Whatsapp