ಶಿರವಸ್ತ್ರ-ಕೇಸರಿ ಶಾಲು ಸಂಘರ್ಷ ತಾರಕಕ್ಕೆ: ಶಾಲಾಕಾಲೇಜುಗಳಿಗೆ ರಜೆ ಘೋಷಿಸಿ ಆನ್ ಲೈನ್ ತರಗತಿ ಆರಂಭಿಸಿ: ಸಿದ್ದರಾಮಯ್ಯ

Prasthutha|

ಗೋವಾ: ಶಿರವಸ್ತ್ರ-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ರಜೆ ಘೋಷಿಸಿ ಆನ್ ಲೈನ್ ತರಗತಿಗಳನ್ನು ಶುರು ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ  ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳೇ ಕದನಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿರುವ ಕಡೆಗಳಲ್ಲಿ ಪುಂಡು ವಿದ್ಯಾರ್ಥಿಗಳ ಮೇಲೆ ಕಠಿಣ ಕ್ರಮಕೈಗೊಳ್ಳದೆ ಪೊಲೀಸರು ಮೂಕ ಪ್ರೇಕ್ಷಕರಾಗಿರುವುದು ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕ ಹುಟ್ಟಿಸಿದೆ. ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಭಣಗೊಳಿಸಿರುವ ರಾಜ್ಯಬಸರ್ಕಾರ ಈಗ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ ಎಂದು ಕಿಡಿಕಾರಿದರು.

ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ ಸಚಿವರು ಮತ್ತು ಗೃಹಸಚಿವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಗಂಭೀರತೆಯನ್ನು ಮುಖ್ಯಮಂತ್ರಿಗಳು ತಕ್ಷಣ ಮಧ್ಯಪ್ರವೇಶಿಸಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಆನ್ ಲೈನ್ ತರಗತಿಗಳನ್ನು ತಕ್ಷಣ ಶುರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.



Join Whatsapp