ಶೂಟಿಂಗ್ ವೇಳೆ ಅಸ್ವಸ್ಥ: ನಟಿ ದೀಪಿಕಾ ಪಡುಕೋಣೆ ಆಸ್ಪತ್ರೆಗೆ ದಾಖಲು

Prasthutha|

ಮುಂಬೈ: ಶೂಟಿಂಗ್ ವೇಳೆ ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೀಪಿಕಾ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ತಕ್ಷಣವೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

- Advertisement -

ಹೈದರಾಬಾದ್’ನಲ್ಲಿ ಪ್ರಭಾಸ್ ನಟನೆಯ `ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ದೀಪಿಕಾ’ಗೆ ದಿಢೀರ್ ಹೃದಯ ಬಡಿತ ಹೆಚ್ಚಳವಾಗಿದೆ ಎನ್ನಲಾಗಿದೆ, ಇದಾದ ಕಲ ಕ್ಷಣದಲ್ಲಿ ದೀಪಿಕಾರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.



Join Whatsapp