ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ: ಆರೋಪಿಯ ಬಂಧನ

Prasthutha|

ಮಂಡ್ಯ: ಮೇಲುಕೋಟೆಯಲ್ಲಿ ನಡೆದ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -


ನಿತೀಶ್ (21) ಬಂಧಿತ ಆರೋಪಿಯಾಗಿದ್ದಾನೆ.


ಡಿವೈಎಸ್ ಪಿ ಮುರಳಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ವಿಚಾರಣೆ ವೇಳೆ ದೀಪಿಕಾರನ್ನು ಪ್ಲ್ಯಾನ್ ಮಾಡಿಯೇ ಕೊಲೆ ಮಾಡಿರುವುದು ತಿಳಿದುಬಂದಿದೆ. ಕೊಲೆಗೂ ಮುನ್ನ ನಿತೀಶ್ ಗುಂಡಿ ತೆಗೆದಿದ್ದನು. ನಂತರ ದೀಪಿಕಾರನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿ ಹೂತು ಹಾಕಿದ್ದನು ಎಂದು ತಿಳಿದುಬಂದಿದೆ.

- Advertisement -


ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ನಿತೇಶ್ ನನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಂಧಿಸಿದ್ದಾರೆ.



Join Whatsapp