ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

Prasthutha|

ಮುಂಬೈ: ವಿ.ಡಿ.ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.

- Advertisement -

ಗುರುವಾರ ಮಹಾರಾಷ್ಟ್ರದ ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್’ಐಆರ್) ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣದ ಕಾರ್ಯಕರ್ತೆ ವಂದನಾ ಡೋಂಗ್ರೆ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣವನ್ನು ದಾಖಲಿಸಲಾಗಿದೆ. ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಗಾಂಧಿ ನಾಗರಿಕರ ಭಾವನೆಗಳನ್ನು ನೋಯಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

Join Whatsapp