ನವದೆಹಲಿ: ‘ಮೋದಿ ಉಪನಾಮ’ ಹೇಳಿಕೆ ಕುರಿತ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಸೂರತ್ ಜಿಲ್ಲಾ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.
ಎಪ್ರಿಲ್ 13ರವರೆಗೆ ರಾಹುಲ್ ಗಾಂಧಿ ಜಾಮೀನು ದೊರೆತಿದೆ. ಮುಂದಿನ ವಿಚಾರಣೆಯನ್ನು ಎ 13ರಂದು ನಡೆಸುವುದಾಗಿ ನ್ಯಾಯಾಲಯ ಹೇಳಿದೆ.
ರಾಹುಲ್ ಗಾಂಧಿಯ ಶಿಕ್ಷೆಯನ್ನು ನ್ಯಾಯಾಲಯವು ಇಂದು ತಡೆಹಿಡಿಯದ ಕಾರಣ ಶಿಕ್ಷೆಯ ಮೇಲೆ ತಡೆಯಾಜ್ಞೆ ಕೋರಿ ಅವರು ಸಲ್ಲಿಸಿದ ಅರ್ಜಿಯ ಮುಂದಿನ ವಿಚಾರಣೆ ಮೇ 3 ರಂದು ನಡೆಯಲಿದೆ.
ಮಾನಹಾನಿ ಪ್ರಕರಣದಲ್ಲಿ ತನಗೆ ವಿಧಿಸಲಾಗಿರುವ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ರಾಹುಲ್ ಗಾಂಧಿ ಸೋಮವಾರ ಸೂರತ್ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿ ಅವರೊಂದಿಗೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ, ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳು ಮತ್ತು ಇತರ ಕಾಂಗ್ರೆಸ್ ಮುಖಂಡರು ನ್ಯಾಯಾಲಯಕ್ಕೆ ಆಗಮಿಸಿದ್ದರು.