ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ಪುರಸಭೆಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಸ್ ಡಿ ಪಿ ಐ ಪಕ್ಷ ಮೈತ್ರಿ ಮಾಡಿಕೊಳ್ಳುವ ಮೂಲಕ ಅಧ್ಯಕ್ಷ ಸ್ಥಾನವು ಕಾಂಗ್ರೆಸ್ ಹಾಗೂ ಉಪಾಧ್ಯಕ್ಷ ಸ್ಥಾನವು ಎಸ್ ಡಿ ಪಿ ಐ ಪಾಲಾಗಿರುತ್ತದೆ. ಈ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದು ಇದರಿಂದ ತೀವ್ರ ಮುಖಭಂಗಕ್ಕೆ ಈಡಾಗಿ ಎಸ್ ಡಿ ಪಿ ಐ ಪಕ್ಷವು ಪಾಕಿಸ್ತಾನವನ್ನು ಬೆಂಬಲಿಸುವ ಪಕ್ಷವೆಂದು ಮತ್ತು ಉಗ್ರಗಾಮಿಗಳ ಪರ ಇರುವವರೆಂದು ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ವಿಜೆಯೇಂದ್ರ ಹಾಗೂ ಬಿಜೆಪಿ ಫೇಸ್ಬುಕ್ ಅಕೌಂಟ್ ಸಾಮಾಜಿಕ ಜಾಲ ತಾಣಗಳಲ್ಲಿ ಅವಹೇಳಿಸಿ, ಅಪಪ್ರಚಾರ ಮಾಡಿದ್ದು, ಈ ಮೂಲಕ ಬಂಟ್ವಾಳದಲ್ಲಿ ಹಿಂದೂ-ಮುಸಲ್ಮಾನರ ನಡುವೆ ದ್ವೇಷವನ್ನು ಉಂಟು ಮಾಡಿ ಕೋಮು ಗಲಭೆಗೆ ಪ್ರಚೋದನೆ ನೀಡಿರುತ್ತಾರೆ ಎಂದು ಆರೋಪಿಸಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಎಸ್ ಎಚ್ ಅವರ ನೇತೃತ್ವದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ..
ಈ ರೀತಿಯ ಬರಹ ಮತದಾರರಿಗೆ, ಪಕ್ಷಕ್ಕೆ, ಚುನಾವಣೆ ಆಯೋಗಕ್ಕೆ ಹಾಗೂ ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ. ಆದ್ದರಿಂದ ಆರೋಪಿ ವಿಜೆಯೇಂದ್ರ ಹಾಗೂ ಬಿಜೆಪಿ ಫೇಸ್ಬುಕ್ ಅಕೌಂಟ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ, ಅಶ್ರಫ್ ತಲಪಾಡಿ ಹಾಗೂ ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಷ್ ಆಲಿ ಉಪಸ್ಥಿತರಿದ್ದರು.