ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ ರಾಹುಲ್ ಅನರ್ಹತೆಗೆ ತಕ್ಕ ಪ್ರತ್ಯುತ್ತರ ನೀಡಬೇಕು: ಪ್ರಿಯಾಂಕಾ ಗಾಂಧಿ

Prasthutha|

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ರಾಹುಲ್ ಅನರ್ಹತೆಗೆ ಪ್ರತ್ಯುತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

- Advertisement -

ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿಯವರು ಅನರ್ಹಗೊಂಡ ಬೆನ್ನಲ್ಲೇ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಮುಖಂಡರ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸುವುದು ನಮ್ಮ ತುರ್ತು ಅಗತ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾಂಗ್ರೆಸ್ಸಿಗನೂ ಕೆಲಸ ಮಾಡಬೇಕು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ರಾಹುಲ್ ಅನರ್ಹತೆಗೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದರು.

Join Whatsapp