Home ಟಾಪ್ ಸುದ್ದಿಗಳು ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ ರಾಹುಲ್ ಅನರ್ಹತೆಗೆ ತಕ್ಕ ಪ್ರತ್ಯುತ್ತರ ನೀಡಬೇಕು: ಪ್ರಿಯಾಂಕಾ ಗಾಂಧಿ

ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ ರಾಹುಲ್ ಅನರ್ಹತೆಗೆ ತಕ್ಕ ಪ್ರತ್ಯುತ್ತರ ನೀಡಬೇಕು: ಪ್ರಿಯಾಂಕಾ ಗಾಂಧಿ

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ರಾಹುಲ್ ಅನರ್ಹತೆಗೆ ಪ್ರತ್ಯುತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿಯವರು ಅನರ್ಹಗೊಂಡ ಬೆನ್ನಲ್ಲೇ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಮುಖಂಡರ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸುವುದು ನಮ್ಮ ತುರ್ತು ಅಗತ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾಂಗ್ರೆಸ್ಸಿಗನೂ ಕೆಲಸ ಮಾಡಬೇಕು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ರಾಹುಲ್ ಅನರ್ಹತೆಗೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದರು.

Join Whatsapp
Exit mobile version