Home ಟಾಪ್ ಸುದ್ದಿಗಳು ಸೋಲು ಶಾಶ್ವತ ಅಲ್ಲ, ಧೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ: ಎಚ್.ಡಿ.ದೇವೇಗೌಡ

ಸೋಲು ಶಾಶ್ವತ ಅಲ್ಲ, ಧೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ: ಎಚ್.ಡಿ.ದೇವೇಗೌಡ

ಬೆಂಗಳೂರು: ಈ ಸೋಲು ಶಾಶ್ವತ ಅಲ್ಲ, ತಾತ್ಕಾಲಿಕ. ಧೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.


ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳ ಮುಖಂಡರ ಜತೆ ಆತ್ಮಾವಲೋಕನ ಸಭೆಗಳನ್ನು ನಡೆಸಿ ಮಾತನಾಡಿ, ನಿಮ್ಮ ಜತೆ ನಾವಿದ್ದೇವೆ, ನಾವಿಬ್ಬರೂ ಹಗಲಿರುಳು ನಿಮ್ಮೊಟ್ಟಿಗೆ ಶ್ರಮಿಸುತ್ತೇವೆ. ಮುಂದೆ ಲೋಕಸಭೆ ಚುನಾವಣೆ ಬರುತ್ತಿದೆ. ಜತೆಗೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯೂ ಬರುತ್ತದೆ. ನಮ್ಮ ಗುರಿ ಈ ಚುನಾವಣೆಗಳೇ ಆಗಿರಬೇಕು. ಇದಕ್ಕೆ ಪೂರಕವಾಗಿ ಪಕ್ಷ ಸಂಘಟನೆ ಮಾಡಬೇಕು ಎಂದರು.


ಇನ್ನು ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆ ಆಗಿದೆ. ಆದರೆ ಈ ಸೋಲು ಮುಂದೆ ದೊಡ್ಡ ಗೆಲುವಿಗೆ ನಾಂದಿ ಆಗಲಿದೆ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಸರಕಾರ ಗ್ಯಾರಂಟಿಗಳನ್ನು ಹೇಳಿ ಜನರಿಗೆ ಯಾಮಾರಿಸುತ್ತಿದ್ದು, ಇದರ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ಜನರ ಜತೆ ಪ್ರಾಮಾಣಿಕವಾಗಿ ನಿಂತರೆ ಅವರೇ ನಮ್ಮ ಪಕ್ಷಕ್ಕೆ ಶಕ್ತಿ ತುಂಬುತ್ತಾರೆ ಎಂದು ಹೇಳಿದ್ದಾರೆ.

Join Whatsapp
Exit mobile version