ದೆಹಲಿ ಗಲಭೆ ಕೇಸ್ | ಜಾಮಿಯಾ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆ ಹೈಕೋರ್ಟ್ ಆದೇಶ

Prasthutha|

ನವದೆಹಲಿ : ಪರೀಕ್ಷೆಗೆ ಹಾಜರಾಗಬೇಕಾದ ಕಾರಣ ಜೈಲಿನಲ್ಲಿರುವ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ಅತಿಥಿಗೃಹಕ್ಕೆ ಸ್ಥಳಾಂತರಿಸುವಂತೆ ದೆಹಲಿ ಹೈಕೋರ್ಟ್ ಗುರುವಾರ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆಸಿಫ್ ರನ್ನು ಪೊಲೀಸರು ಬಂಧಿಸಿ, ಜೈಲಿಗೆ ಕಳುಹಿಸಿದ್ದರು. ಶುಕ್ರವಾರದಿಂದ ಆಸಿಫ್ ಹಾಜರಾಗಲಿರುವ ಬಿಎ (ಪರ್ಷಿಯನ್) ಪರೀಕ್ಷೆ ಮೂರು ದಿನಗಳ ಕಾಲ ನಡೆಯಲಿದೆ.

- Advertisement -

ಪರೀಕ್ಷೆಗೆ ಹಾಜರಾಗಲು ಅನುಕೂಲವಾಗುವಂತೆ ಲಜಪತ್ ನಗರದ ಅತಿಥಿಗೃಹಕ್ಕೆ ಅವರನ್ನು ಸ್ಥಳಾಂತರಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ.

- Advertisement -