ವಿವಾದಿತ ಹೊಸ ಪಠ್ಯವನ್ನು ರದ್ದುಪಡಿಸಿ ಹಳೇ ಪಠ್ಯವನ್ನೇ ಮುಂದುವರಿಸಿ : ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

Prasthutha|

ಬೆಂಗಳೂರು : ರಾಜ್ಯ ಸರಕಾರವು ಪರೀಷ್ಕ್ರತ ಪಠ್ಯಗಳಲ್ಲಿನ ಕೆಲವು ತಪ್ಪುಗಳನ್ನು ಸರಿಪಡಿಸಿ ಕಳೆದು ಹೋದ ಮಾನ ಕಾಪಾಡುವ ವ್ಯರ್ಥ ಪ್ರಯತ್ನವನ್ನು ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಪಠ್ಯದಲ್ಲಿ ಸರಕಾರವು ಹಾಕಲಿರುವ ತೇಪೆಗಳಿಗಿಂತ ತೂತುಗಳೇ ಹೆಚ್ಚಾಗಿವೆ . ಹೊಸ ಪಠ್ಯವನ್ನು ರದ್ದುಪಡಿಸಿ ಹಳೇಯ ಪಠ್ಯವನ್ನೇ ಮುಂದುವರಿಸುವುದೊಂದೇ ಈಗಿನ ಪರಿಹಾರ ಎಂದು ಹೇಳಿದ್ದಾರೆ. ರಾಜ್ಯ ಸರಕಾರದ ಆದೇಶ ಇಲ್ಲದೆ ರಚನೆಗೊಂಡ ರೋಹಿತ ಚಕ್ರತೀರ್ತ ಎಂಬ ಬುದ್ದಿಗೇಡಿಯ ಅಧ್ಯಕ್ಷತೆಯ ಸಮಿತಿಯೇ ಅಕ್ರಮವಾಗಿರುವಾಗ ಆ ಸಮಿತಿಯ ಪಠ್ಯ ಹೇಗೆ ಕ್ರಮಬದ್ದವಾಗಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಸರಕಾರ ಪರೀಷ್ಕ್ರತ ಪಠ್ಯಪುಸ್ತಕದ ಬಗೆಗಿನ ವಿವಾದವನ್ನು ಪ್ರತಿಷ್ಟೆಯಾಗಿ ಸ್ವೀಕರಿಸದೆ ನಮ್ಮ ವಿಧ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದ್ದಿದ್ದಾರೆ.



Join Whatsapp