ನವದೆಹಲಿ: ದೆಹಲಿ ಪೊಲೀಸರ ಅಂಕಿಅಂಶಗಳ ಪ್ರಕಾರ 2021 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿದಿನ ಕನಿಷ್ಠ ಐದು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.
2020 ರಲ್ಲಿ 1618 ಪ್ರಕರಣಗಳಿಗೆ ಹೋಲಿಸಿದರೆ ಅತ್ಯಾಚಾರ ಪ್ರಕರಣಗಳಲ್ಲಿ 21.6 % ಹೆಚ್ಚಳವಾಗಿದೆ. ಕಳೆದ ವರ್ಷ 1969 ಪ್ರಕರಣ ದಾಖಲಾಗಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೊದಲ ವಾರದಲ್ಲಿ ಸುಮಾರು 60% ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಅತ್ಯಾಚಾರ ಪ್ರಕರಣಗಳಲ್ಲಿ ಒಟ್ಟು 35,221 ಆರೋಪಿಗಳನ್ನು ಬಂಧಿಸಲಾಗಿತ್ತು.
ಸುಮಾರು 1.22% ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳು ಸಂತ್ರಸ್ತರಿಗೆ ಅಪರಿಚಿತರಾಗಿದ್ದಾರೆ. ಇನ್ನುಳಿದಂತೆ 98.7% ಕ್ಕಿಂತಲೂ ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಗಳು ಸಂತ್ರಸ್ತರಿಗೆ ಪರಿಚಿತರಾಗಿದ್ದಾರೆ.
ಈ ಮಧ್ಯೆ ಅತ್ಯಾಚಾರ ಪ್ರಕರಣಗಳಲ್ಲಿ ಬಂಧಿತರಾದ ಸುಮಾರು 1% ಆರೋಪಿಗಳು ಸಂತ್ರಸ್ತರಿಗೆ ಪರಿಚಯವಿರುವುದಿಲ್ಲ. ಹೆಚ್ಚಿನ ಸಂದರ್ಭದಲ್ಲಿ ಆತ್ಯಾಚಾರ ಆರೋಪಿಗಳು ಕುಟುಂಬದ ಸದಸ್ಯರು, ಸ್ನೇಹಿತರು, ನೆರೆಹೊರೆ ಮತ್ತು ಸಂಬಂಧಿಕರು ಎಂದು ದೆಹಲಿ ಪೊಲೀಸ್ ಮುಖ್ಯಸ್ಥ ರಾಕೇಶ್ ಅಸ್ತಾನ ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ ಹೆಚ್ಚಿನ ಆರೋಪಿಗಳು ಮೊದಲ ಬಾರಿಗೆ ಅಪರಾಧ ಕೃತ್ಯದಲ್ಲಿ ಪಾಲ್ಗೊಂಡವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ದೌರ್ಜನ್ಯ ಪ್ರಕರಣದಲ್ಲಿ ಕಳೆದ ವರ್ಷ 2429 ಪ್ರಕರಣ ದಾಖಲಾಗುವುದರೊಂದಿಗೆ 17.5% ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಒಟ್ಟು 421 ಪ್ರಕರಣಗಳು ದಾಖಲಾಗಿವೆ.