ದೆಹಲಿ: 10 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ

Prasthutha|

ನವದೆಹಲಿ: 10 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆಗೈದಿರುವ ಘಟನೆ ಉತ್ತರ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ನಿರ್ಜನ ಪ್ರದೇಶದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿಯ ಮನೆಯ ಪಕ್ಕದಲ್ಲಿರುವ ರಾಹುಲ್ ಎಂಬಾತ ಬಾಲಕಿಯನ್ನು ಕರೆದೊಯ್ಯುತ್ತಿರುವುದನ್ನು ಸ್ಥಳೀಯರು ನೋಡಿದ್ದಾರೆ ಎಂದು ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ರವಿಕುಮಾರ್ ಸಿಂಗ್ ತಿಳಿಸಿದ್ದಾರೆ.

ರಾತ್ರಿ ಮಗಳು ಕಾಣೆಯಾದ ಬಗ್ಗೆ ದೂರು ಬಂದಿತ್ತು. ಮರುದಿನ ಬೆಳಿಗ್ಗೆ ಬಾಲಕಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕವಾಗಿ ಸಾಮೂಹಿಕ ಅತ್ಯಾಚಾರವಾಗಿದ್ದು ತಿಳಿದುಬಂದಿದೆ ಅವರು ಹೇಳಿದ್ದಾರೆ.

Join Whatsapp