Home ಟಾಪ್ ಸುದ್ದಿಗಳು ದೆಹಲಿ: 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು

ದೆಹಲಿ: 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು

ನವಹಲಿ: ದೆಹಲಿ ಜಲ ಮಂಡಳಿಯ (ಡಿಜೆಬಿ) ನೀರು ಶುದ್ಧೀಕರಣ ಘಟಕದಲ್ಲಿ ಮಗು 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಗುವಿನ ರಕ್ಷಣಾ ಕಾರ್ಯ ನಡೆಸುತ್ತಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ದೆಹಲಿ ಅಗ್ನಿಶಾಮಕ ದಳ (ಡಿಎಫ್‌ಎಸ್) ಜಂಟಿಯಾಗಿ ಕಾರ್ಯಾಚರಿಸುತ್ತಿದೆ.

ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪಶ್ಚಿಮ ದೆಹಲಿಯ ಕೇಶೋಪುರ ಮಂಡಿಯ ಡಿಜೆಬಿ ಘಟಕದಲ್ಲಿ ಮಗು ಕೊಳವೆ ಬಾವಿಗೆ ಬಿದ್ದಿರುವ ಘಟನೆಯ ಬಗ್ಗೆ ಮಾಹಿತಿ ಲಭಿಸಿತು ಎಂದು ಡಿಎಫ್‌ಎಸ್ ಮುಖ್ಯಸ್ಥ ಅತುಲ್ ಗಾರ್ಗ್ ತಿಳಿಸಿದ್ದಾರೆ.

ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಮಗು ಬಿದ್ದಿರುವ ಕೊಳವೆ ಬಾವಿಗೆ ಸಮಾನಾಂತರವಾಗಿ ಎನ್‌ಡಿಆರ್‌ಎಫ್ ತಂಡವು ಮತ್ತೊಂದು ಬೋರ್‌ವೆಲ್ ಕೊರೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version