ದೆಹಲಿ: ಮಹಿಳೆಯರ ಬಳಿಕ ಕಾರ್ಮಿಕರಿಗೂ ಉಚಿತ ಬಸ್ ಪ್ರಯಾಣ

Prasthutha|

ನವದೆಹಲಿ: ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಯೋಜನೆ ರೂಪಿಸಿದ್ದ ದೆಹಲಿಯ ಆಪ್ ಸರ್ಕಾರ ಇದೀಗ, ನೋಂದಾಯಿತ ಕಾರ್ಮಿಕರಿಗೂ ಈ ಸೌಲಭ್ಯವನ್ನು ವಿಸ್ತರಿಸಿದೆ.

- Advertisement -

ದೆಹಲಿ ಸರ್ಕಾರ ಬುಧವಾರದಿಂದ ಈ ಯೋಜನೆಯನ್ನು ಆರಂಭಿಸಿದ್ದು, ಕಾರ್ಮಿಕರು ಡಿಟಿಸಿ ಮತ್ತು ಕ್ಲಸ್ಟರ್ ಬಸ್ ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಪಡೆಯಲಿದ್ದಾರೆ. ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇಂದು ಯೋಜನೆಗೆ ಚಾಲನೆ ನೀಡಿದರು. ಇದೇ ವೇಳೆ ಯೋಜನೆಯ ಫಲಾನುಭವಿಗಳಿಗೆ ಉಚಿತ ಬಸ್ ಪಾಸ್ ವಿತರಿಸಿದರು.

Join Whatsapp