ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಮಾಲಿನ್ಯ ನಿಯಂತ್ರಣದ ಬಗ್ಗೆ 24 ಗಂಟೆಗಳ ಒಳಗೆ ಸ್ಪಷ್ಟ ಚಿತ್ರಣವನ್ನು ನಮ್ಮ ಮುಂದೆ ಇಡಬೇಕು ಎಂದು ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ.
ಮಾಲಿನ್ಯ ಮಟ್ಟವನ್ನು ನಿಯಂತ್ರಿಸಲು ತಳಮಟ್ಟದಲ್ಲಿ ಗಂಭೀರ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಕೊನೆಗೆ ‘ನಮ್ಮ ಹೆಗಲ ಮೇಲೆ ಬಂದೂಕು ಇಡುವಂತಿಲ್ಲ’ ಎಂದು ಕೇಂದ್ರ ಮತ್ತು ದೆಹಲಿ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.
ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠವು ಮಾಲಿನ್ಯ ಮಟ್ಟವನ್ನು ತಗ್ಗಿಸಲು ತಳಮಟ್ಟದಲ್ಲಿ ಗಂಭೀರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.