ಫೆಬ್ರವರಿ 5 ರಂದು ಮತದಾನ, 8 ರಂದು ಮತ ಎಣಿಕೆ
ಭಾರತೀಯ ಚುನಾವಣಾ ಆಯೋಗವು (ಇಸಿಐ) ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ.
ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಫಲಿತಾಂಶ ಹೊರ ಬೀಳಲಿದೆ.
70 ಸದಸ್ಯ ಬಲದ ವಿಧಾನಸಭೆಯ ಅವಧಿ ಫೆಬ್ರವರಿ 23ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮುನ್ನ ಹೊಸ ಸದನ ರಚನೆಗೆ ಚುನಾವಣೆ ನಡೆಯಬೇಕಿದೆ. ದೆಹಲಿಯಲ್ಲಿ ಸಾಂಪ್ರದಾಯಿಕವಾಗಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ.
85 ವರ್ಷ ಮೇಲ್ಪಟ್ಟ ಮತದಾರರು ಮತ್ತು ದಿವ್ಯಾಂಗರು ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಸೌಲಭ್ಯವಿರುತ್ತದೆ. ಮತದಾನದ ಅನುಕೂಲಕ್ಕಾಗಿ ಮತದಾನ ಕೇಂದ್ರಗಳಲ್ಲಿ ಸ್ವಯಂಸೇವಕರು, ಗಾಲಿಕುರ್ಚಿಗಳು ಮತ್ತು ರ‍್ಯಾಂಪ್‌ಗಳನ್ನು ಮಾಡಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಭಾಷೆಯ ಬಗ್ಗೆ ಕಾಳಜಿ ವಹಿಸಿ. ಮಹಿಳೆಯರ ವಿರುದ್ಧ ಅಸಭ್ಯ ಭಾಷೆ ಬಳಸಬೇಡಿ ಎಂದು ಹೇಳಿದ್ದಾರೆ. ಮತ ಎಣಿಕೆಗೆ ಇವಿಎಂ ಸಂಪೂರ್ಣ ಸುರಕ್ಷಿತವಾಗಿದೆ, ಇವಿಎಂ ಟ್ಯಾಂಪರಿಂಗ್ ಆರೋಪಗಳು ಆಧಾರರಹಿತವಾಗಿವೆ ಎಂದರು.