Home ಟಾಪ್ ಸುದ್ದಿಗಳು ದೆಹಲಿಯ ಬೇಬಿ ಕೇರ್ ಆಸ್ಪತ್ರೆಯಲ್ಲಿ ಬೆಂಕಿ ದುರಂತ, 7 ಶಿಸುಗಳು ಮೃತ್ಯು: ರಾಷ್ಟ್ರಪತಿ, ಪ್ರಧಾನಿ ಸಂತಾಪ

ದೆಹಲಿಯ ಬೇಬಿ ಕೇರ್ ಆಸ್ಪತ್ರೆಯಲ್ಲಿ ಬೆಂಕಿ ದುರಂತ, 7 ಶಿಸುಗಳು ಮೃತ್ಯು: ರಾಷ್ಟ್ರಪತಿ, ಪ್ರಧಾನಿ ಸಂತಾಪ

ನವದೆಹಲಿ: ದೆಹಲಿಯ ವಿವೇಕ್ ವಿಹಾರ ಬೇಬಿ ಕೇರ್‌‌ ಕಟ್ಟಡದಲ್ಲಿ ರಾತ್ರಿ 11.30 ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದೆ. ಘಟನೆಯಲ್ಲಿ 7 ನವಜಾತ ಶಿಶುಗಳು ಸಾವನ್ನಪ್ಪಿವೆ. ಕಟ್ಟಡದಿಂದ 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ.

ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

X ಮಾಡಿರುವ ಪ್ರಧಾನಿ ಮೋದಿ, ದೆಹಲಿಯ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಹೃದಯ ವಿದ್ರಾವಕವಾಗಿದೆ.ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳೊಂದಿಗೆ ನನ್ನ ಸಂತಾಪಗಳಿವೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಅಗ್ನಿ ಅವಘಡದಲ್ಲಿ ಮೃತಪಟ್ಟ ನವಜಾತ ಶಿಶುಗಳಿಗೆರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಸಂತಾಪ ಸೂಚಿಸಿದ್ದಾರೆ. ಇದೊಂದು ಹೃದಯ ವಿದ್ರಾವಕ ಘಟನೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

ಅಗ್ನಿಶಾಮಕ ಅಧಿಕಾರಿ ರಾಜೇಶ್, ರಾತ್ರಿ 11:32 ಕ್ಕೆ, ಅಗ್ನಿಶಾಮಕ ಸೇವಾ ನಿಯಂತ್ರಣ ಕೊಠಡಿಗೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಹಿತಿ ಪಡೆದೆವು. ಒಟ್ಟು 16 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. 2 ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. ಒಂದು ಆಸ್ಪತ್ರೆಯ ಕಟ್ಟಡ ಮತ್ತು ಬಲಭಾಗದಲ್ಲಿರುವ ವಸತಿ ಕಟ್ಟಡದ 2 ಮಹಡಿಗಳು ಬೆಂಕಿಗೆ ಆಹುತಿಯಾಗಿವೆ. 11-12 ಜನರನ್ನು ರಕ್ಷಿಸಲಾಗಿದೆ ಮತ್ತು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.

Join Whatsapp
Exit mobile version