ದೆಹಲಿ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರು

Prasthutha|

ನವದೆಹಲಿ: ಎಎಪಿ ಗುಜರಾತ್ ಘಟಕದ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಅವರು ಪ್ರಧಾನಿ ಮೋದಿ ಅವರ ತಾಯಿಯ ವಿರುದ್ಧ ನೀಡಿದ ಹೇಳಿಕೆಯನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ  ಮೇಲೆ ಹಲ್ಲೆ ನಡೆಸಿದ್ದಾರೆ.

- Advertisement -

ಪ್ರತಿಭಟನಾ ನಿರತ ಬಿಜೆಪಿಯ ಮಹಿಳಾ ಕಾರ್ಯಕರ್ತರು, ಮಹಿಳಾ ಪೊಲೀಸರೊಂದಿಗೆ ಸಂಘರ್ಷಕ್ಕಿಳಿದಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಸುತ್ತುವರಿದ ಪ್ರತಿಭಟನಕಾರರು ಆಕೆಯ  ಮೇಲೆ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿ ಕಾಣಿಸಿದೆ.

ನಗರದ ಎಎಪಿ ಕಚೇರಿಯ ಹೊರಗೆ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ದಿಲ್ಲಿ ಘಟಕದ ಅಧ್ಯಕ್ಷ ಆದೇಶ್ ಗುಪ್ತಾ ಸೇರಿದಂತೆ ಪಕ್ಷದ ಹಲವಾರು ನಾಯಕರು ಭಾಗವಹಿಸಿದ್ದರು.

- Advertisement -

ಗೋಪಾಲ್ ಇಟಾಲಿಯರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸಬೇಕೆಂದು ಬಿಜೆಪಿ ಆಗ್ರಹಿಸಿದ್ದು, ಪ್ರಧಾನಿಯವರ ತಾಯಿಯವರನ್ನು ನಿಂದಿಸಿದ್ದಕ್ಕಾಗಿ ಗುಜರಾತ್ ನ   ಜನತೆ  ಆಪ್ ಗೆ ತಕ್ಕ ಬೆಲೆ ತೆರುವಂತೆ ಮಾಡಲಿದ್ದಾರೆಂದು ಬಿಜೆಪಿ ಎಚ್ಚರಿಸಿದೆ.

ಆದರೆ ಇಟಾಲಿಯಾ ಅವರು ತನ್ನ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದು,  ತಾನು ಪಾಟಿದಾರ್ ಸಮುದಾಯಕ್ಕೆ ಸೇರಿದವನಾಗಿರುವುದರಿಂದಲೇ  ಬಿಜೆಪಿಯ ತನ್ನ ಮೇಲೆ ಗುರಿಯಿಟ್ಟಿದೆ ಎಂದು ಅವರು ಆರೋಪಿಸಿದ್ದಾರೆ.



Join Whatsapp