ಕೃಷಿ ಕಾಯ್ದೆ ವಿರೋಧಿಸಿ ಶಿರೋಮಣಿ ಅಕಾಲಿದಳದಿಂದ “ಬ್ಲಾಕ್ ಫ್ರೈಡೆ” ಪ್ರತಿಭಟನೆ

Prasthutha|

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿದಳ ಬ್ಲಾಕ್ ಫ್ರೈಡ್ ಆಚರಿಸಿದ್ದು, ರಾಜಧಾನಿ ದೆಹಲಿ ಗಡಿಯನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿವೆ.

- Advertisement -

ಕೇಂದ್ರ ಸರ್ಕಾರ ಈ ಕಾಯ್ದೆಗಳನ್ನು ಜಾರಿಗೊಳಿಸಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶಿರೋಮಣಿ ಅಕಾಲಿದಳ ಈ ಕ್ರಮಕ್ಕೆ ಮುಂದಾಗಿದೆ.

ಅಕಾಲಿದಳ ಈ ದಿನವನ್ನು “ಕಪ್ಪು ಶುಕ್ರವಾರ” ಎಂದು ಘೋಷಿಸಿ, ಗುರುದ್ವಾರ ರಕಾಬ್ ಗಂಜ್ ಸಾಹಿಬ್ ನಿಂದ ಸಂಸತ್ ಭವನದ ವರೆಗೆ ಬೃಹತ್ ಜಾಥಾವನ್ನು ಹಮ್ಮಿಕೊಂಡಿದೆ ಎಂದು ಶಿರೋಮಣಿ ಅಕಾಲಿದಳ (ಎಸ್.ಎ.ಡಿ) ಅಧ್ಯಕ್ಷ ಸುಖ್ ಬೀರ್ ಸಿಂಗ್ ಬಾದಲ್ ತಿಳಿಸಿದ್ದಾರೆ. ಸಂಸದ ಹರ್ಸಿಮ್ರತ್ ಕೌರ್ ಬಾದಲ್ ಅವರು ಈ ಪ್ರತಿಭಟನೆಯ ನೇತೃತ್ ವಹಿಸಲಿದ್ದಾರೆ.

- Advertisement -

ಅಕಾಲಿದಳದ ಈ ನಡೆಯ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಟ್ರಾಫಿಕ್ ಪೊಲೀಸ್ ಅಧಿಕಾರಿ, ಕೇಂದ್ರದ ವಿರುದ್ಧದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಲಿ ಗಡಿ ಜಾರೋಡ ಕಾಲನ್ ಮತ್ತು ಹೆದ್ದಾರಿಯನ್ನು ಮುಚ್ಚಲಾಗಿದೆ. ಈ ನಿಟ್ಟಿನಲ್ಲಿ ಜನತೆ ಸಂಯಮ ಮತ್ತು ಸಹಕಾರವನ್ನು ಪ್ರದರ್ಶಿಸಬೇಕೆಂದು ಮನವಿ ಮಾಡಿದರು. ಪ್ರತಿಭಟನೆ ನಿಟ್ಟಿನಲ್ಲಿ ಗಡಿಯಲ್ಲಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.



Join Whatsapp