Home ಟಾಪ್ ಸುದ್ದಿಗಳು ದೆಹಲಿ ಚಲೋ ಮೆರವಣಿಗೆ: ಹರಿಯಾಣದ 7 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆ ಸ್ಥಗಿತ!

ದೆಹಲಿ ಚಲೋ ಮೆರವಣಿಗೆ: ಹರಿಯಾಣದ 7 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆ ಸ್ಥಗಿತ!

ಚಂಡೀಗಡ: ಫೆಬ್ರವರಿ 13 ರಂದು ರೈತರಿಂದ ‘ದೆಹಲಿ ಚಲೋ’ ಮೆರವಣಿಗೆಗೆ ನಡೆಯಲಿದ್ದು, ಅದಕ್ಕೆ ಮುಂಚಿತವಾಗಿ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಗಳು ಮತ್ತು ಒಮ್ಮೆಲೇ ಹೆಚ್ಚು ಎಸ್ ಎಂಎಸ್ ಕಳುಹಿಸುವ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಹರಿಯಾಣ ಸರ್ಕಾರ ಆದೇಶಿಸಿದೆ.

ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಫೆಬ್ರವರಿ 11ರ ಬೆಳಿಗ್ಗೆ 6ರಿಂದ ಫೆಬ್ರವರಿ 13ರ ಮಧ್ಯಾಹ್ನ 12 ಗಂಟೆಯವರೆಗೂ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ದೆಹಲಿ ಚಲೋ’ ಹೋರಾಟ ದೇಶದ ಏಕತೆ, ಭದ್ರತೆಗೆ ಬೆದರಿಕೆ: ಪ್ರಧಾನಿ ಮೋದಿ ಹೇಳಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ ಸಂಘಟನೆ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200 ಕ್ಕೂ ಹೆಚ್ಚು ರೈತ ಸಂಘಗಳು ಫೆಬ್ರವರಿ 13 ರಂದು ‘ದೆಹಲಿ ಚಲೋ’ ಮೆರವಣಿಗೆಯನ್ನು ಆಯೋಜಿಸಿವೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಅಂಗೀಕರಿಸಿ ಕಾನೂನು ಜಾರಿಗೆ ತರುವಂತೆ ಕೇಂದ್ರವನ್ನು ಒತ್ತಾಯಿಸಿ ದಿಲ್ಲಿ ಚಲೋ ನಡೆಯಲಿದೆ ಎನ್ನಲಾಗಿದೆ.

Join Whatsapp
Exit mobile version