ನಾಳೆ ದಿಲ್ಲಿ ಚಲೋ ಪ್ರತಿಭಟನೆ: ಬಿಜೆಪಿ ಸಂಸದರು, ಶಾಸಕರುಗಳಿಗೆ ಭಾಗವಹಿಸುವಂತೆ ಸಿಎಂ ಆಹ್ವಾನ

Prasthutha|

ಬೆಂಗಳೂರು: ತೆರಿಗೆ ಹಂಚಿಕೆ ವಿಚಾರದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರದ ನೀತಿ ವಿರುದ್ಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಳೆ ದೆಹಲಿಯಲ್ಲಿ ಪ್ರತಿಭಟನೆ ನಡೆಯಲಿದೆ. ಬಿಜೆಪಿ ಸಂಸದರು ಮತ್ತು ಶಾಸಕರುಗಳಿಗೂ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಸಿಎಂ ಆಹ್ವಾನ ನೀಡಿದ್ದಾರೆ.

- Advertisement -

ಈ ಪ್ರತಿಭಟನೆಗೆ ರಾಜ್ಯ ಸರ್ಕಾರದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನಸಭಾ ಸದಸ್ಯರು ಭಾಗಿಯಾಗಲಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಇದು ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಡೆಸುವ ಪ್ರತಿಭಟನೆ ಅಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಡೆಯುವ ಪ್ರತಿಭಟನೆ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಬಿಜೆಪಿ ಸಂಸದರು ಮತ್ತು ಶಾಸಕರುಗಳಿಗೂ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ.

ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ತಾರತಮ್ಯ ವಿರೋಧಿಸಿ ನಾಳೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಸಂಸದರಿಗೆ ವೈಯಕ್ತಿಕವಾಗಿ ಪತ್ರ ಬರೆದಿದ್ದು, ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ರಾಜ್ಯಸಭೆ ಸದಸ್ಯ ವೀರೇಂದ್ರ ಹೆಗ್ಗಡೆ, ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ ಸೇರಿದಂತೆ ಕಾಂಗ್ರೆಸ್‌ನ ಸಂಸದರಿಗೂ ಕೂಡ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

- Advertisement -



Join Whatsapp