Home ಟಾಪ್ ಸುದ್ದಿಗಳು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಸರ್ಕಾರಿ ಅಧಿಕಾರಿಯನ್ನು ಅಮಾನತುಗೊಳಿಸಿ ದೆಹಲಿ ಸಿಎಂ ಆದೇಶ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಸರ್ಕಾರಿ ಅಧಿಕಾರಿಯನ್ನು ಅಮಾನತುಗೊಳಿಸಿ ದೆಹಲಿ ಸಿಎಂ ಆದೇಶ

ನವದೆಹಲಿ: ಮೃತ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಸರ್ಕಾರಿ ಅಧಿಕಾರಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.


ಇನ್ನು ಪ್ರಕರಣ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮತ್ತು ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನಿಯೋಜನೆಗೊಂಡಿರುವ ಉಪನಿರ್ದೇಶಕ ಹಲವಾರು ತಿಂಗಳುಗಳಿಂದ ತನ್ನ ಸ್ನೇಹಿತನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿ ಅಧಿಕಾರಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಎಫ್ ಐಆರ್‌ನಲ್ಲಿ ಆರೋಪಿಯ ಪತ್ನಿಯನ್ನೂ ಆರೋಪಿಯನ್ನಾಗಿ ಮಾಡಲಾಗಿದೆ.

Join Whatsapp
Exit mobile version