ಮುಸ್ಲಿಂ ವಿರೋಧಿ ಘೋಷಣೆ ಪ್ರಕರಣ | ಆರೋಪಿ ಪಿಂಕಿ ಚೌಧರಿಗೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

Prasthutha|

ನವದೆಹಲಿ: ಸಮಾವೇಶವೊಂದರಲ್ಲಿ ಮುಸ್ಲಿಂ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಹಿಂದೂ ರಕ್ಷಾ ದಳದ ಮುಖ್ಯಸ್ಥ ಭೂಪಿಂದರ್ ತೋಮರ್ ಅಲಿಯಾಸ್ ಪಿಂಕಿ ಚೌಧರಿಗೆ ದೆಹಲಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

- Advertisement -

ದೆಹಲಿ ನ್ಯಾಯಾಲಯವು ಈಗಾಗಲೇ ದೆಹಲಿ ಹೈಕೋರ್ಟ್‌ ಭೂಪಿಂದರ್‌ ತೋಮರ್‌ಗೆ ಜಾಮೀನು ನೀಡಿರುವುದನ್ನು ಗಣನೆಗೆ ತೆಗೆದುಕೊಂಡು ಈ ಜಾಮೀನು ನೀಡಿದ್ದು 50,000 ರೂ. ಜಾಮೀನು ಬಾಂಡ್ ಮತ್ತು ಎರಡು ಶ್ಯೂರಿಟಿಗಳ ಆಧಾರದಲ್ಲಿ ಜಾಮೀನು ನೀಡಿದೆ. ಮುಸ್ಲಿಂ ವಿರೋಧಿ ಘೋಷಣೆ ಸಂಜೆ ನಾಲ್ಕರ ಸಂದರ್ಭ ಕೂಗಲಾಗಿದೆ, ಆದರೆ ಚೌಧರಿ ಮಧ್ಯಾಹ್ನ 1:30ರ ಸುಮಾರಿಗೆ ಸಮಾವೇಶದಿಂದ ನಿರ್ಗಮಿಸಿದ್ದಾರೆ, ಆದ್ದರಿಂದ ಅವರ ವಿಚಾರಣೆ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಆಗಸ್ಟ್ 8ರಂದು ಜಂತರ್ ಮಂತರ್ ನಲ್ಲಿ ಬಿಜೆಪಿ ವಕ್ತಾರ ಅಶ್ವಿನಿ ಉಪಾದ್ಯಾಯ ನೇತೃತ್ವದಲ್ಲಿ ಭಾರತ್ ಜೋಡೋ ಅಭಿಯಾನದ ಸಮಾವೇಶ ನಡೆಸಲಾಗಿತ್ತು. ಸಮಾವೇಶದಲ್ಲಿ ಪಿಂಕಿ ಚೌಧರಿ ಸಹಿತ ನೂರಾರು ಮಂದಿ ಭಾಗವಹಿಸಿದ್ದರು. ಈ ಸಂದರ್ಭ ಮುಸ್ಲಿಂ ವಿರೋಧಿ ಘೋಷಣೆಗಳು ಕೇಳಿ ಬಂದಿದ್ದವು, ಈ ಹಿನ್ನೆಲೆ ದೆಹಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು.

Join Whatsapp