Home ಟಾಪ್ ಸುದ್ದಿಗಳು ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ ಸೇರಿ ಹಲವರಿಗೆ ದೆಹಲಿ ಕೋರ್ಟ್ ಸಮನ್ಸ್

ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ ಸೇರಿ ಹಲವರಿಗೆ ದೆಹಲಿ ಕೋರ್ಟ್ ಸಮನ್ಸ್

ನವದೆಹಲಿ: ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ಮತ್ತು ರಾಬ್ರಿ ದೇವ್, ಮಗಳು ಹೇಮಾ ಯಾದವ್ ಮತ್ತು ಇತರರಿಗೆ ಫೆಬ್ರವರಿ 9 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಯಾದವ್ ಕುಟುಂಬದ ನಿಕಟವರ್ತಿ ಅಮಿತ್ ಕತ್ಯಾಲಿ ಮತ್ತು ಮಾಜಿ ರೈಲ್ವೆ ಉದ್ಯೋಗಿ ಹೃದಯಾನಂದ್ ಚೌಧರಿ ಅವರಿಗೂ ಅದೇ ದಿನಾಂಕದಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ ಎನ್ನಲಾದ ಉದ್ಯೋಗಕ್ಕಾಗಿ ಭೂಮಿ ಹಗರಣದ ಮನಿ ಲಾಂಡರಿಂಗ್ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಚಾರ್ಜ್ಶೀಟ್ ಅನ್ನು ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯ ಒಪ್ಪಿಕೊಂಡಿದ್ದು, ಈ ಸಮನ್ಸ್ ಜಾರಿ ಮಾಡಿದೆ.

Join Whatsapp
Exit mobile version