ನವದೆಹಲಿ: ದೆಹಲಿ ಪೊಲೀಸ್ ಅಪರಾಧ ವಿಭಾಗದ ಪೊಲೀಸರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಐದನೇ ಸಮನ್ಸ್ ಕೇಜ್ರಿವಾಲ್ ತಪ್ಪಿಸಿಕೊಂಡ ದಿನವೇ ಈ ಬೆಳವಣಿಗೆ ನಡೆದಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಲು ದೆಹಲಿ ಪೊಲೀಸ್ ಅಪರಾಧ ವಿಭಾಗದ ಪೊಲೀಸರು ಅವರ ನಿವಾಸದಲ್ಲಿದ್ದಾರೆ ಎಂದು ತಿಳಿದುಬಂದಿದೆ. ನೋಟಿಸ್ ಅಥವಾ ಪ್ರಕರಣ ಯಾವುದರ ಬಗ್ಗೆ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.