ದೆಹಲಿ ಅಬಕಾರಿ ನೀತಿ ಹಗರಣ: ದೋಷಮುಕ್ತನಾಗಿ ಹೊರಗೆ ಬರುತ್ತೇನೆ ಎಂದ ಕವಿತಾ

Prasthutha|

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೋಷಮುಕ್ತನಾಗಿ ಹೊರ ಬರುತ್ತೇನೆ ಎಂದು ಬಿಆರ್ ಎಸ್ ನಾಯಕಿ ಹಾಗೂ ವಿಧಾನಪರಿಷತ್ ಸದಸ್ಯೆ ಕೆ. ಕವಿತಾ ಹೇಳಿದ್ದಾರೆ. ಇದು ಹಣ ಅಕ್ರಮ ವರ್ಗಾವಣೆ ಪ್ರಕರಣವಲ್ಲ. ರಾಜಕೀಯ ಪ್ರೇರಿತ ಪ್ರಕರಣ. ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

ಪ್ರಕರಣ ಸಂಬಂಧ ಇ.ಡಿ ಕಸ್ಟಡಿ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಕವಿತಾ ಅವರನ್ನು ಇಂದು(ಮಂಗಳವಾರ) ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.



Join Whatsapp