18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮಾಸಿಕ ₹1 ಸಾವಿರ ಸಹಾಯಧನ: ದೆಹಲಿ ಸರ್ಕಾರ ಘೋಷಣೆ

Prasthutha|

ನವದೆಹಲಿ: ಮುಖ್ಯಮಂತ್ರಿ ಮಹಿಳಾ ಸಮ್ಮಾನ್’ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೂ ಮಾಸಿಕ ₹1 ಸಾವಿರ ನೀಡುವ ಘೋಷಣೆಯನ್ನು ಎಎಪಿ ಆಡಳಿತದ ದೆಹಲಿ ಸರ್ಕಾರವು ತನ್ನ 2024–25ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದೆ.

- Advertisement -


ಹಣಕಾಸು ಸಚಿವೆ ಆತಿಶಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. 76,000 ಕೋಟಿ ರೂ ಗಾತ್ರದ ಬಜೆಟ್ನಲ್ಲಿ ಶೇ. 21ಕ್ಕೂ ಹೆಚ್ಚು ಹಣವನ್ನು ಶಿಕ್ಷಣಕ್ಕೆ ನೀಡಲಾಗಿದೆ. ಇದರ ಜೊತೆಗೆ, ಬಜೆಟ್ ನಲ್ಲಿ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯನ್ನು ಘೋಷಿಸಲಾಗಿದೆ.

ಈ ಯೋಜನೆಯಲ್ಲಿ 18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲಾ ಮಹಿಳೆಯರಿಗೂ ತಿಂಗಳಿಗೆ 1,000 ರೂ ನೀಡಲಾಗುತ್ತದೆ. ಏಪ್ರಿಲ್ 1ರಿಂದ ಇದು ಜಾರಿಗೆ ಬರಲಿದೆ. ‘ಈ ಯೋಜನೆಗಾಗಿಯೇ ₹2,714 ಕೋಟಿ ಮೀಸಲಿಡಲಾಗಿದೆ. ಇದು ಮಹಿಳೆಯರ ಸಬಲೀಕರಣಕ್ಕಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ಯೋಜನೆಗಳಿಗೆ ₹6,216 ಕೋಟಿ ಮೀಸಲಿಡಲಾಗಿದೆ.

Join Whatsapp