Home ಟಾಪ್ ಸುದ್ದಿಗಳು 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮಾಸಿಕ ₹1 ಸಾವಿರ ಸಹಾಯಧನ: ದೆಹಲಿ ಸರ್ಕಾರ ಘೋಷಣೆ

18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮಾಸಿಕ ₹1 ಸಾವಿರ ಸಹಾಯಧನ: ದೆಹಲಿ ಸರ್ಕಾರ ಘೋಷಣೆ

ನವದೆಹಲಿ: ಮುಖ್ಯಮಂತ್ರಿ ಮಹಿಳಾ ಸಮ್ಮಾನ್’ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೂ ಮಾಸಿಕ ₹1 ಸಾವಿರ ನೀಡುವ ಘೋಷಣೆಯನ್ನು ಎಎಪಿ ಆಡಳಿತದ ದೆಹಲಿ ಸರ್ಕಾರವು ತನ್ನ 2024–25ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದೆ.


ಹಣಕಾಸು ಸಚಿವೆ ಆತಿಶಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. 76,000 ಕೋಟಿ ರೂ ಗಾತ್ರದ ಬಜೆಟ್ನಲ್ಲಿ ಶೇ. 21ಕ್ಕೂ ಹೆಚ್ಚು ಹಣವನ್ನು ಶಿಕ್ಷಣಕ್ಕೆ ನೀಡಲಾಗಿದೆ. ಇದರ ಜೊತೆಗೆ, ಬಜೆಟ್ ನಲ್ಲಿ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯನ್ನು ಘೋಷಿಸಲಾಗಿದೆ.

ಈ ಯೋಜನೆಯಲ್ಲಿ 18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲಾ ಮಹಿಳೆಯರಿಗೂ ತಿಂಗಳಿಗೆ 1,000 ರೂ ನೀಡಲಾಗುತ್ತದೆ. ಏಪ್ರಿಲ್ 1ರಿಂದ ಇದು ಜಾರಿಗೆ ಬರಲಿದೆ. ‘ಈ ಯೋಜನೆಗಾಗಿಯೇ ₹2,714 ಕೋಟಿ ಮೀಸಲಿಡಲಾಗಿದೆ. ಇದು ಮಹಿಳೆಯರ ಸಬಲೀಕರಣಕ್ಕಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ಯೋಜನೆಗಳಿಗೆ ₹6,216 ಕೋಟಿ ಮೀಸಲಿಡಲಾಗಿದೆ.

Join Whatsapp
Exit mobile version