ದೆಹಲಿಯಲ್ಲಿ ಮುಂದುವರಿದ ವಾಯುಮಾಲಿನ್ಯ: ಒಂದು ವಾರದವರೆಗೆ ಶಾಲೆ ಮುಚ್ಚಲು ದೆಹಲಿ ಸರ್ಕಾರ ನಿರ್ಧಾರ

Prasthutha|

ನವದೆಹಲಿ: ಕಳೆದ ಹಲವಾರು ದಿನಗಳಿಂದ ದೆಹಲಿಯಲ್ಲಿ ಕಾಡುತ್ತಿರುವ ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ಸೋಮವಾರದಿಂದ ಒಂದು ವಾರ ಕಾಲ ಶಾಲೆಗಳನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಪ್ರಕಟಿಸಿದ್ದಾರೆ.

- Advertisement -

ವಾಯು ಮಾಲಿನ್ಯದಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸೋಮವಾರದಿಂದ ಒಂದು ವಾರದ ಕಾಲ ಶಾಲೆಗಳನ್ನು ಮುಚ್ಚಲಾಗುವುದೆಂದು ಮುಖ್ಯಮಂತ್ರಿ ಕೇಜ್ರಿವಾಲ್ ತಿಳಿಸಿದರು.

ನವೆಂಬರ್ 14 ರಿಂದ 17 ರ ವರೆಗೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದರು.

- Advertisement -

ಸರ್ಕಾರಿ ಕಚೇರಿಗಳು ವಾರದ ಕಾಲ ಪೂರ್ಣ ಸಾಮರ್ಥ್ಯದೊಂದಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸುತ್ತವೆ ಮತ್ತು ಖಾಸಗಿ ಸಂಸ್ಥೆಗಳು ಕೂಡ ಮನೆಯಲ್ಲಿದ್ದುಕೊಂಡು ಕಾರ್ಯನಿರ್ವಹಿಸುವುದು ಉತ್ತಮ ಎಂದು ಕೇಜ್ರಿವಾಲ್ ಸಲಹೆ ನೀಡಿದರು.

Join Whatsapp