ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಿಸಲು ವೀಕೆಂಡ್ ಲಾಕ್ ಡೌನ್ ಗೆ ಸಿದ್ಧ: ದೆಹಲಿ ಸರಕಾರ

Prasthutha|

ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದಂತೆ ವಾಯುಮಾಲಿನ್ಯ ನಿಯಂತ್ರಿಸಲು ತುರ್ತು ಸಭೆ ನಡೆಸಿದ ದೆಹಲಿ ಸರ್ಕಾರ ದೆಹಲಿಯಲ್ಲಿ ವೀಕೆಂಡ್ ಲಾಕ್ ಡೌನ್, ಒಂದು ವಾರಗಳ ಕಾಲ ವರ್ಕ್ ಫ್ರಮ್ ಹೋಂ ನಡೆಸಲು ಸೂಚಿಸಿದೆ.

- Advertisement -


ದೆಹಲಿಯಲ್ಲಿ ನಿರ್ಮಾಣ ಮತ್ತು ಕೈಗಾರಿಕಾ ಚಟುವಟಿಕೆಗಳನ್ನು ಕೆಲಕಾಲ ಸ್ಥಗಿತಗೊಳಿಸುವಂತೆ ದೆಹಲಿ ಸರ್ಕಾರ ಶಿಫಾರಸು ಮಾಡಿದೆ. ಬಿಕ್ಕಟ್ಟಿನ ಬಗ್ಗೆ ಸುಪ್ರೀಂ ಕೋರ್ಟ್ ಕಠಿಣ ಪ್ರಶ್ನೆಗಳನ್ನು ಎತ್ತಿದ್ದು ಮತ್ತು ತುರ್ತು ಕ್ರಮಗಳಿಗೆ ಕರೆ ನೀಡಿದ ಮರುದಿನವೇ ಕೇಂದ್ರ ಮತ್ತು ದೆಹಲಿಯ ಅಧಿಕಾರಿಗಳು ಮಾಲಿನ್ಯದ ವಿರುದ್ಧ ಹೋರಾಡಲು ಚರ್ಚೆ ನಡೆಸಿದ್ದಾರೆ.

ದೆಹಲಿಯಲ್ಲಿ ನಾವು ವಾರಾಂತ್ಯದ ಲಾಕ್ ಡೌನ್ ಬಗ್ಗೆ ಪ್ರಸ್ತಾಪಿಸಿದ್ದೇವೆ, ನಾವು ಅದಕ್ಕೆ ಸಿದ್ಧರಿದ್ದೇವೆ. ಲಾಕ್ ಡೌನ್ ಮಾಡಬೇಕೇ? ಬೇಡವೇ? ಎಂಬುದು ಈಗ ನ್ಯಾಯಾಲಯದ ನಿರ್ದೇಶನಗಳನ್ನು ಅವಲಂಬಿಸಿದೆ ಎಂದು ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.

- Advertisement -


ಸರ್ಕಾರಿ ಮತ್ತು ಖಾಸಗಿ ಕಚೇರಿಗಳಿಗೆ ಮನೆಯಿಂದ ಕೆಲಸ ಮಾಡಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಮತ್ತು ಸುತ್ತಮುತ್ತಲಿನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸುಪ್ರೀಂ ಕೋರ್ಟ್ ನಿನ್ನೆ ಸೂಚಿಸಿದ ಹಿನ್ನೆಲೆಯಲ್ಲಿ ಇಂದು ತುರ್ತು ಸಭೆ ನಡೆಸಲಾಯಿತು. ತುರ್ತು ಸಭೆ ನಡೆಸಿ ಅವರು ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ತಿಳಿಸುವಂತೆ ನಾವು ಕೇಂದ್ರಕ್ಕೆ ಸೂಚಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.


ದೆಹಲಿ ಚಿಕ್ಕದಾಗಿರುವುದರಿಂದ ಲಾಕ್ ಡೌನ್, ವಾಯು ಗುಣಮಟ್ಟದ ಮೇಲೆ ಸೀಮಿತ ಪರಿಣಾಮ ಬೀರಲಿದೆ. ವಾಯು ಗುಣಮಟ್ಟದ ವಿಷಯವನ್ನು ಇಡೀ ಪ್ರದೇಶದಲ್ಲಿ ಪರಿಹರಿಸಬೇಕು. ಕೇಂದ್ರ ಸರ್ಕಾರವು ಇಡೀ ಪ್ರದೇಶದಲ್ಲಿ ಲಾಕ್ ಡೌನ್ ಮಾಡಿದರೆ ನಾವು ದೆಹಲಿಯನ್ನು ಲಾಕ್ ಡೌನ್ ಮಾಡಲು ಸಿದ್ಧವಿರುವುದಾಗಿ ಕೇಜ್ರಿವಾಲ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿತ್ತು.

Join Whatsapp