Home ಟಾಪ್ ಸುದ್ದಿಗಳು ಕೇಜ್ರಿವಾಲ್ ಬಂಧನವಾದರೆ ದೆಹಲಿ ಸರ್ಕಾರ ಜೈಲಿನಿಂದಲೇ ನಡೆಯಲಿದೆ: ಆಪ್

ಕೇಜ್ರಿವಾಲ್ ಬಂಧನವಾದರೆ ದೆಹಲಿ ಸರ್ಕಾರ ಜೈಲಿನಿಂದಲೇ ನಡೆಯಲಿದೆ: ಆಪ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಂದಿನ ದಿನಗಳಲ್ಲಿ ಬಂಧಿಸಿದರೆ ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.


ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ನಡೆದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಎಎಪಿ, ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಲು ಮೋದಿ ಸರ್ಕಾರ ಹೂಡಿರುವ ಷಡ್ಯಂತ್ರ ಎಂದು ಆರೋಪಿಸಿದೆ.


ಪಕ್ಷದ ಶಾಸಕರು ಮುಖ್ಯಮಂತ್ರಿಯೊಂದಿಗೆ ಸಭೆ ನಡೆಸಿ ಚರ್ಚಿಸಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ಒತ್ತಾಯಿಸಲಾಗಿದೆ ಎಂದು ಸಚಿವೆ ಅತೀಶಿ ಸುದ್ದಿಗಾರರಿಗೆ ಹೇಳಿದ್ದಾರೆ.

Join Whatsapp
Exit mobile version