ಡಿಕೆ ಶಿವಕುಮಾರ್ ಗೆ ದುಬೈ ತೆರಳಲು ದೆಹಲಿ ಹೈಕೋರ್ಟ್ ಅನುಮತಿ

Prasthutha|

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ವಿಶೇಷ ಅತಿಥಿಯಾಗಿರುವ ಕಾರ್ಯಕ್ರಮವೊಂದಕ್ಕೆ ದುಬೈಗೆ ತೆರಳಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್ ಆರೋಪಿಯಾಗಿದ್ದಾರೆ.

- Advertisement -

ಶಿವಕುಮಾರ್ ಪರ ವಕೀಲರು ನ್ಯಾಯಾಲಯದ ಮುಂದೆ ದುಬೈನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಶಿವಕುಮಾರ್ ಅವರ ಉಪಸ್ಥಿತಿ ಅಗತ್ಯವಿದೆ ಎಂದು ವಾದಿಸಿದರು. ವಾದವನ್ನು ಆಲಿಸಿದ ನ್ಯಾಯಮೂರ್ತಿ ಆಶಾ ಮೆನನ್ ಮಾರ್ಚ್ 31 ಮತ್ತು ಏಪ್ರಿಲ್ 6 ರ ನಡುವೆ ಒಂದು ವಾರ ವಿದೇಶಕ್ಕೆ ಹೋಗಲು ಅವಕಾಶ ಮಾಡಿಕೊಟ್ಟಿದ್ದು, ಆರೋಪಿ ಹಿಂದಿರುಗಿದ ನಂತರ ತನಿಖಾಧಿಕಾರಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದೆ.

Join Whatsapp