ವಿಚಾರಣೆ ವಿಡಿಯೊ ತೆಗೆದುಹಾಕುವಂತೆ ಕೇಜ್ರಿವಾಲ್ ಪತ್ನಿಗೆ ದೆಹಲಿ ಹೈಕೋರ್ಟ್ ತಾಕೀತು

Prasthutha|

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಯ ವಿಡಿಯೊ ರೆಕಾರ್ಡಿಂಗ್ ಅನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಶನಿವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಅವರಿಗೆ ದೆಹಲಿ ಹೈಕೋರ್ಟ್ ಸೂಚಿಸಿದೆ.

- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ರೋಸ್ ಅವೆನ್ಯೂ ಕೋರ್ಟ್ಗೆ ಹಾಜರುಪಡಿಸಿದ್ದ ವೇಳೆ ನ್ಯಾಯಾಲಯದ ವಿಡಿಯೊ ಕಾನ್ಫರೆನ್ಸಿಂಗ್ ನಿಯಮಗಳನ್ನು ಉಲ್ಲಂಘಿಸಿ ವಿಡಿಯೊ ರೆಕಾರ್ಡ್ ಮಾಡಿದ್ದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿದ ಮನವಿ ಮೇರೆಗೆ ಕೋರ್ಟ್ ಈ ಸೂಚನೆ ನೀಡಿದೆ.

Join Whatsapp