ನ್ಯಾ. ಚಂದ್ರಚೂಡ್ ರನ್ನು ಸಿಜೆಐ ಆಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿದ ಕಕ್ಷಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್

Prasthutha|

ನವದೆಹಲಿ: ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದೆ.

- Advertisement -

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್ ಅವರ ವಿಭಾಗೀಯ ಪೀಠವು ಇದು ಪ್ರಚಾರಕ್ಕಾಗಿ ಸಲ್ಲಿಸಿದ ಅರ್ಜಿ ಎಂದು ಕರೆದಿದ್ದು, ಅರ್ಜಿದಾರರಿಗೆ 1 ಲಕ್ಷ ರೂ. ದಂಡವಿಧಿಸಿದೆ.

ಪ್ರಸ್ತುತ ಅರ್ಜಿಯನ್ನು ಯಾವುದೇ ಪುರಾವೆಗಳಿಲ್ಲದೆ ಪ್ರಚಾರವನ್ನು ಪಡೆಯಲು ಮಾತ್ರ ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

- Advertisement -

ನ್ಯಾಯಮೂರ್ತಿ ಚಂದ್ರಚೂಡ್ ಅವರ ನೇಮಕವು ಸಂವಿಧಾನದ ನಿಬಂಧನೆಗಳನ್ನು ಉಲ್ಲಂಘಿಸಿದೆ. ಆದ್ದರಿಂದ ಚಂದ್ರಚೂಡ್ ಅವರ ನೇಮಕಕ್ಕೆ ತಕ್ಷಣ ತಡೆ ನೀಡುವಂತೆ ಗ್ರಾಮ ಉದಯ್ ಫೌಂಡೇಶನ್ ಎಂಬ ಸಂಸ್ಥೆಯ ಅಧ್ಯಕ್ಷ ಸಂಜೀವ್ ಕುಮಾರ್ ತಿವಾರಿ ಎಂಬುವವರು ಅರ್ಜಿ ಸಲ್ಲಿಸಿದ್ದರು.



Join Whatsapp