ಬೆಂಗಳೂರು: ಯುಎಪಿಎ ಅಡಿಯಲ್ಲಿ ಬಂಧಿತರಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರ ವಿರುದ್ಧ ದಾಖಲಿಸಲಾದ ಎಫ್ ಐಆರ್ ಪ್ರತಿಗಾಗಿ ಸಲ್ಲಿಸಿದ ಮನವಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಎನ್ ಐಎಗೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ.
ಮುಹಮ್ಮದ್ ಯೂಸುಫ್ ಎಂಬವರು ಈ ಸಂಬಂಧ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಯುಎಪಿಎ ಅಡಿಯಲ್ಲಿ ಬಂಧಿತರಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ ಐ) ವಿವಿಧ ಸದಸ್ಯರ ವಿರುದ್ಧ ಎನ್ ಐಎ ದಾಖಲಿಸಿರುವ ಎಫ್ ಐಆರ್ ಪ್ರತಿಯನ್ನು ನೀಡಬೇಕು ಎಂದು ಅರ್ಜಿಯಲ್ಲಿ ಅವರು ಮನವಿ ಮಾಡಿದ್ದರು. ಅರ್ಜಿ ಸ್ವೀಕರಿಸಿದ ದೆಹಲಿ ಹೈಕೋರ್ಟ್, ಈ ಸಂಬಂಧ ಎನ್ ಐಎಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.
ಇತ್ತೀಚೆಗೆ ಎನ್ ಐಎ ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಚೇರಿ, ನಾಯಕರ ಮನೆ ಮೇಲೆ ದಾಳಿ ನಡೆಸಿ 100ಕ್ಕೂ ಅಧಿಕ ಮುಖಂಡರನ್ನು ಬಂಧಿಸಿದ್ದರು.