Home ಟಾಪ್ ಸುದ್ದಿಗಳು ಕೇಜ್ರಿವಾಲ್’ಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ

ಕೇಜ್ರಿವಾಲ್’ಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.


ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರನ್ನೊಳಗೊಂಡ ಹೈಕೋರ್ಟ್ ನ ರಜಾ ಕಾಲದ ಏಕ ಸದಸ್ಯ ಪೀಠ, ಪ್ರಕರಣ ಸಂಬಂಧ ನ್ಯಾಯಾಲಯದ ಮುಂದಿಟ್ಟ ಸಾಕ್ಷ್ಯಗಳು ಮತ್ತು ವಾದದ ಕುರಿತಂತೆ ಜಾರಿ ನಿರ್ದೇಶನಾಲಯವನ್ನು ಪ್ರಶಂಸಿಸಿದೆ. ಜಾಮೀನು ನೀಡುವ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯ ಈ ವಿಷಯಗಳನ್ನು ಪರಿಗಣಿಸಿಲ್ಲ ಎಂದಿದೆ.


ಅಲ್ಲದೆ, ವಿಚಾರಣಾ ನ್ಯಾಯಾಲಯವು ಈ ಪ್ರಕರಣದಲ್ಲಿ ವಾದಿಸಲು ಇ.ಡಿಗೆ ಸಾಕಷ್ಟು ಅವಕಾಶವನ್ನು ನೀಡಬೇಕಾಗಿತ್ತು. ಹಾಗಾಗಿ, ದೋಷದಿಂದ ಕೂಡಿದ ಜಾಮೀನು ಆದೇಶಕ್ಕೆ ತಡೆ ನೀಡುತ್ತಿರುವುದಾಗಿ ನ್ಯಾಯಮೂರ್ತಿಗಳು ಹೇಳಿದ್ದಾರೆ.

Join Whatsapp
Exit mobile version