ನವದೆಹಲಿ: ಡಾಬರ್ ಚ್ಯವನಪ್ರಾಶ್ ವಿರುದ್ಧ ಅವಹೇಳನಕಾರಿ ಜಾಹೀರಾತುಗಳನ್ನು ಪ್ರಕಟಿಸದಂತೆ ಪತಂಜಲಿ ಸಂಸ್ಥೆಗೆ ದೆಹಲಿ ಹೈಕೋರ್ಟ್ ಗುರುವಾರ ನಿರ್ಬಂಧ ಹೇರಿದೆ.
ಪತಂಜಲಿ ಸಂಸ್ಥೆ ತನ್ನ ವಿರುದ್ಧ ನೀಡುತ್ತಿರುವ ಅವಹೇಳನಕಾರಿ ಜಾಹೀರಾತುಗಳ ಪ್ರಸಾರಕ್ಕೆ ತಡೆ ನೀಡಬೇಕು ಎಂದು ಕೋರಿ ಡಾಬರ್, ಹೈಕೋರ್ಟ್ ಮೆಟ್ಟಿಲೇರಿತ್ತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಿನಿ ಪುಷ್ಕರ್ಣ ನೇತೃತ್ವದ ಪೀಠ, ಮನವಿಯನ್ನು ಮಾನ್ಯ ಮಾಡಿರುವುದಾಗಿ ಹೇಳಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಜುಲೈ 14ಕ್ಕೆ ಮುಂದೂಡಿದೆ.
