ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಆರೋಪದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿವಿಯ ಹಿಂದೂ ಕಾಲೇಜಿನ ಸಹಾಯಕ ಪ್ರಾಧ್ಯಾಪಕರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ಪ್ರೊಫೆಸರ್ ರತನ್ ಲಾಲ್ ಜ್ಞಾನವಾಪಿ ಮಸೀದಿಯ ರಚನೆಯ ಕುರಿತು ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು ಮತ್ತು ಆಕ್ಷೇಪಾರ್ಹ ಕಮೆಂಟ್ ಗಳನ್ನು ಮಾಡಿದ್ದರು ಎಂದು ತಿಳಿಸಿದ್ದಾರೆ.
ಸದ್ಯ ಅವರ ವಿರುದ್ಧ ಐಪಿಸಿ ಸೆಕ್ಷನ್ 295 ಎ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.