ಲಖಿಂಪುರ ಹಿಂಸಾಚಾರ ವಿರೋಧಿಸಿ ಯುವ ಕಾಂಗ್ರೆಸ್ ನಿಂದ ಟಾರ್ಚ್ ಲೈಟ್ ಮೆರವಣಿಗೆ

Prasthutha|

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಹಿಂಸಾಚಾರವನ್ನು ವಿರೋಧಿಸಿ ಯುವ ಕಾಂಗ್ರೆಸ್ ಬುದವಾರ ಸಂಜೆ ದೆಹಲಿಯಲ್ಲಿ ಟಾರ್ಚ್ ಲೈಟ್ ಜಾಥಾವನ್ನು ಆಯೋಜಿಸಿತ್ತು.

- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ನಾಲ್ವರು ರೈತರನ್ನು ಒಳಗೊಂಡಂತೆ 8 ಮಂದಿಯನ್ನು ಹತ್ಯೆ ನಡೆಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಗಿದೆ.



Join Whatsapp