ದೆಹಲಿ: ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

Prasthutha|

ನವದೆಹಲಿ: ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಿ, ಮಳೆ ಕೊರತೆ ವರ್ಷದಲ್ಲಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸಬೇಕು. ಕಾವೇರಿ ಕಣಿವೆಯ 4 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದೆ.

- Advertisement -


ದೆಹಲಿಯ ಜಂತರ್ ಮಂತರ್ನಲ್ಲಿ ರಾಜ್ಯದ ವಿವಿಧ ಭಾಗದಿಂದ ಸೇರಿದ ನೂರಾರು ಕಾರ್ಯಕರ್ತರು ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದರು.



Join Whatsapp