ದೆಹಲಿ ಹತ್ಯಾಕಾಂಡ: ತಾಹಿರ್ ಹುಸೇನ್ ವಿರುದ್ಧದ ವಿಚಾರಣೆಗೆ ತಡೆ ನೀಡಲು ಸುಪ್ರೀಂ ನಕಾರ

Prasthutha|

ನವದೆಹಲಿ: 2020 ರ ಈಶಾನ್ಯ ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಎಪಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳಿಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

- Advertisement -

ಈ ಪ್ರಕರಣದ ಅರ್ಜಿ ಹೈಕೋರ್ಟ್’ನ ಅಧೀನದಲ್ಲಿರುವಾಗ ಈ ಹಂತದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಸಿ.ಟಿ ರವಿಕುಮಾರ್ ಅವರ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ದೆಹಲಿ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಹುಸೇನ್ ವಿರುದ್ಧ ದಾಖಲಾಗಿರುವ ಮೂರು ಕ್ರಿಮಿನಲ್ ಪ್ರಕರಣಗಳಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ ಎರಡು ತಿಂಗಳ ಬಳಿಕ ಸುಪ್ರೀಂ ಕೋರ್ಟ್’ನಿಂದ ಈ ಆದೇಶ ಹೊರಬಂದಿದೆ.

- Advertisement -

ದೆಹಲಿ ಹತ್ಯಾಕಾಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ತಾಹೀರ್ ಹುಸೇನ್, ಹನ್ನೆರಡಕ್ಕೂ ಹೆಚ್ಚು ಮುಸ್ಲಿಂ ಸಾಮಾಜಿಕ ಹೋರಾಟಗಾರರು ಮತ್ತು ಮಾನವ ಹಕ್ಕುಗಳ ಹೋರಾಟಗಾರರು 2020 ರಿಂದ ಕರಾಳ UAPA ಕಾಯ್ದೆ ಅಡಿಯಲ್ಲಿ ಬಂಧಿತರಾಗಿ ಜೈಲಿನಲ್ಲಿದ್ದಾರೆ. ಈ ಬೆಳವಣಿಗೆಯನ್ನು ವಿಶ್ವಸಂಸ್ಥೆ, ಭಾರತದಲ್ಲಿನ ವಿರೋಧ ಪಕ್ಷಗಳು ಸೇರಿದಂತೆ ಜಗತ್ತಿನಾದ್ಯಂತ ಮಾನವ ಹಕ್ಕುಗಳ ಸಂಸ್ಥೆಗಳು ಈ ಅಕ್ರಮ ಬಂಧನಗಳನ್ನು ಖಂಡಿಸಿವೆ ಮತ್ತು ಹಿಂಸಾಚಾರದ ಬಗ್ಗೆ ನ್ಯಾಯಯುತ ತನಿಖೆಗೆ ಒತ್ತಾಯಿಸಿವೆ.



Join Whatsapp